ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ ಘೋಷಣೆ

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಮೈಸೂರು ( mysuru ) ಜಿಲ್ಲೆ ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಗೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಕರಣ ಸಂಬಂಧ ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ 5 ಲಕ್ಷ ಪರಿಹಾರದ ಚೆಕ್ ವಿತರಿಸಿದರು.

ಟಿ. ನರಸೀಪುರ: ಚಿರತೆಗೆ ಬಲಿಯಾದ ಯುವತಿಯ ಕುಟುಂಬಕ್ಕೆ 7.5 ಲಕ್ಷ ಪರಿಹಾರ, ಉದ್ಯೋಗದ ಭರವಸೆ - leopard attack in T Narasipura taluk girl death Rs 7.5 lakh compensation announced by forest department| TV9 Kannada

ಇದೇ ವೇಳೆ ಕುಟುಂಬದ ಒಬ್ಬರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿದ್ದಾರೆ. ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಮದ ಜನರು ಧರಣಿ ಕುಳಿತಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು, RFOಗೆ ಕಡ್ಡಾಯ ರಜೆ ನೀಡಿ ತನಿಖೆ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಧರಣಿಯನ್ನು ಕೈಬಿಟ್ಟರು.  ಇದನ್ನೂ ಓದಿ : –  ಹೃದಯಾಘಾತದಿಂದ ಮೃತಪಟ್ಟ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ

Vistara News Launch | ಕೆ.ಆರ್. ನಗರದಲ್ಲಿ ವಿಸ್ತಾರ ಕನ್ನಡ ಸಂಭ್ರಮ; ಗಣ್ಯರಿಂದ ವಿಸ್ತಾರ ಚಾನೆಲ್‌ಗೆ ಶುಭ ಹಾರೈಕೆ - ವಿಸ್ತಾರ ನ್ಯೂಸ್

ತಾಲೂಕಿನಲ್ಲಿ ಚಿರತೆ ಹಾವಳಿ ಇರುವ ಹಿನ್ನೆಲೆ 15 ತಂಡಗಳನ್ನು ರಚನೆ ಮಾಡಿ ಬೇರೆಬೇರೆ ಕಡೆಗಳಲ್ಲಿ ಕಾರ್ಯಾಚರಣೆಗೆ ಇಳಿಸುತ್ತೇವೆ. 7 ದಿನಗಳ ಒಳಗೆ ಕಂಡಲ್ಲಿ ಗುಂಡು ಹಾರಿಸಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯ ನಾವು ಮಾಡುತ್ತೇವೆ. ಆರ್ಎಫ್ಒ ಅವರನ್ನು ಕಡ್ಡಾಯ ರಜೆ ಮೇಲೆ ಹೋಗಲು ಸೂಚಿಸಲಾಗಿದೆ. ಡಿ.2ರಿಂದ ಅವರು ರಜೆ ಮೇಲೆ ಹೋಗಲಿದ್ದಾರೆ ಮತ್ತು ಅವರ ಕಡೆಯಿಂದ ತಪ್ಪು ನಡೆದಿದೆಯೇ ಎಂಬುದನ್ನು ತಿನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತೇವೆ ಎಂದು ಮಹಿಳಾ ಅಧಿಕಾರಿ ಹೇಳಿದ್ದಾರೆ.

Leopard attack | ಚಿರತೆ ದಾಳಿಗೆ ಬಲಿಯಾದ ಯುವತಿ ಕುಟುಂಬಕ್ಕೆ 7.5 ಲಕ್ಷ ರೂ. ಪರಿಹಾರ ಘೋಷಣೆ, ಪ್ರತಿಭಟನೆ ಅಂತ್ಯ - ವಿಸ್ತಾರ ನ್ಯೂಸ್

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮನೆ ಮುಂದೆ ಕುಳಿತಿದ್ದಾಗ ಗುರುವಾರ ಸಂಜೆ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾ ( megana ) ಳನ್ನ (20) ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕೊನೆಯುಸಿರೆಳೆದಿದ್ದಳು.

ಇದನ್ನೂ ಓದಿ : – ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಬಾಲಿವುಡ್ ನಟಿ ಸ್ವರಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!