ಕತಾರ್ ನಲ್ಲಿ ನಡೆಯುತ್ತಿರುವ FIFA World Cup ಅಂತಿಮ ಹಂತದತ್ತ ತಲುಪುತ್ತಿದೆ. ಇಂದು ತಡರಾತ್ರಿ 12.30ಕ್ಕೆ ನಡೆಯಲಿರುವ ಮೊದಲ ಸೆಮಿ ಫೈನಲ್ ನಲ್ಲಿ ಅರ್ಜೆಂಟೀನಾ –ಕ್ರೊವೇಷ್ಯಾ (Argentina vs Croatia) ತಂಡಗಳು ಸೆಣೆಸಾಟ ನಡೆಸಲಿದೆ. ಇಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಟಿಕೆಟ್ ಪಡೆಯಲಿದೆ.
ಲುಸೈಲ್ ಕ್ರೀಡಾಂಗಣದಲ್ಲಿ 88 ಸಾವಿರಕ್ಕೂ ಅಧಿಕ ಪ್ರೇಕ್ಷಕರ ಮುಂದೆ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಗುಂಪು ಹಂತದಲ್ಲಿ ಸೌಧಿ ಅರೇಬಿಯಾ ವಿರುದ್ಧ ಅಚ್ಚರಿಯ ಸೋಲಿನ ಆಘಾತ ಅನುಭವಿಸಿ ಬಳಿಕ ಪುಟಿದೆದ್ದ ಲಿಯೊನೆಲ್ ಮೆಸ್ಸಿ (Lionel Messi) ನಾಯಕತ್ವದ ಅರ್ಜೆಂಟೀನಾ ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇದನ್ನು ಓದಿ : –ಅರುಣಾಚಲ ಪ್ರದೇಶದಲ್ಲಿ ಯುದ್ಧ ವಿಮಾನ ಗಸ್ತು ನಡೆಸುತ್ತಿರುವ ಭಾರತೀಯ ವಾಯುಪಡೆ
ಅರ್ಜೆಂಟೀನಾ 1986ರ ಬಳಿಕ ವಿಶ್ವಕಪ್ ಗೆದ್ದಿಲ್ಲ. ಇದೀಗ ಮೆಸ್ಸಿ ಈ ಬಾರಿ ಮರಡೋನಾ ರೀತಿಯಲ್ಲೇ ತಂಡವನ್ನು ಮುನ್ನಡೆಸಿ ಪ್ರಶಸ್ತಿ ತಂದುಕೊಡುತ್ತಾರ ಎಂಬುದು ಕುತೂಹಲ ಕೆರಳಿಸಿದೆ. ಬಹುತೇಕ ಕೊನೆಯ ವಿಶ್ವಕಪ್ ನಲ್ಲಿ ಆಡಲಿರುವ ಮೆಸ್ಸಿ ಪಾಲಿಗಂತೂ ಇದು ಪ್ರತಿಷ್ಠೆಯ ಕದನವಾಗಿದೆ.
ಇದನ್ನು ಓದಿ : –ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟಿ ನೋರಾ ಫತೇಹಿ