ಮೆಸ್ಕಾಂ ಕಚೇರಿ ಒಳಗೆ ಇದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿಯಿಂದ ಹೊಡೆದಿರುವ ಘಟನೆ ಚಿಕ್ಕಮಗಳೂರು ( CHIKKAMAGALURU ) ಜಿಲ್ಲೆಯ ಶೃಂಗೇರಿ ಪಟ್ಟಣದ ಮೆಸ್ಕಾಂ ( MESCOM ) ಕಚೇರಿಯಲ್ಲಿ ನಡೆದಿದೆ.
ಸರ್ಕಾರಿ ಕಚೇರಿಯಲ್ಲಿ ರಾಷ್ಟ್ರೀಯ ನಾಯಕರ ಭಾವಚಿತ್ರವನ್ನು ಹಾಕಲಾಗಿದೆ. ಅದರಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ಅಂಬೇಡ್ಕರ್ ಭಾವಚಿತ್ರದಲ್ಲಿ ಚಪ್ಪಲಿ ಗುರುತು ಕಾಣಿಸಿಕೊಂಡಿದೆ. ಹಾಗಾಗಿ ಫೋಟೋ ಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ದಲಿತ ಸಂಘಟನೆಯವರು ಅಂಬೇಡ್ಕರ್ ಫೋಟೋವನ್ನು ಸ್ವಚ್ಛಗೊಳಿಸಿ ಹೂವಿನ ಹಾರ ಹಾಕಿದ್ದಾರೆ.ಇದನ್ನು ಓದಿ :- ಶಿಗ್ಗಾಂವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಕಚೇರಿ ಒಳಗೆ ಇದ್ದ ಅಂಬೇಡ್ಕರ್ ಫೋಟೋಗೆ ಅಪಮಾನವಾದರೂ ಅಧಿಕಾರಿಗಳು ದೂರು ನೀಡಲು ಮೀನಾಮೇಷ ಎಣಿಸಿದ್ದರು. ದಲಿತ ಸಂಘಟನೆಗಳು ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ಹೊರಹಾಕಿದ ಬಳಿಕ ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ :- ಡಿ.30ಕ್ಕೆ ಮಂಡ್ಯದಲ್ಲಿ ಅಮಿತ್ ಶಾ ಸಮಾವೇಶ…!