ಬೆಂಗಳೂರಿ (BANGALORE ) ನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ( DURNK AND DRIVE ) ನಿಂದಾಗಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಡ್ರಂಕ್ ಅಂಡ್ ಡ್ರೈವ್ ಟೆಸ್ಟ್ ನಡೆಸಲು ಟ್ರಾಫಿಕ್ ಪೊಲೀಸರು ಈಗಾಗಲೇ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ನಿನ್ನೆ ನಗರದಾದ್ಯಂತ ಡ್ರಂಕ್ ಅಂಡ್ ಡ್ರೈವ್ ಕಾರ್ಯಚರಣೆ ನಡೆಸಲಾಗಿದ್ದು, ಒಂದೇ ದಿನ 146 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿವೆ.
On the night of 23 December 2022 BTP conducted special drive against drunken drive, and booked 146 cases against drivers driving under the influence of alcohol. This drive will continue till 31st December 2022 to prevent Road Traffic Accidents.
— Dr.M.A.Saleem, IPS (@SplCPTraffic) December 24, 2022
ಜನವರಿ 1ರ ತನಕ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ. ಇತ್ತೀಚೆಗೆ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ನಗರದಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವಲ್ಲಿ ಟ್ರಾಫಿಕ್ ಪೊಲೀಸ ( TRAFFIC POLICE ) ರು ಈ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನು ಓದಿ :- ಶಿಗ್ಗಾಂವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ