ಮಹದಾಯಿ ವಿಚಾರದಲ್ಲಿ ಬಿಜೆಪಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ -ಸುರ್ಜೆವಾಲಾ

ಹುಬ್ಬಳ್ಳಿ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಹುಬ್ಬಳ್ಳಿ ( huballi ) ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ( randeep surjiwala )  ಹೇಳಿದ್ದಾರೆ.

MCD election 2022: BJP releases list of 40 star campaigners for upcoming  polls in Delhi | Elections News – India TV

3 ತಿಂಗಳ ನಂತರ ಕಾಂಗ್ರೆಸ್ ( congress ) ಸರ್ಕಾರ ಅಧಿಕಾರಕ್ಕೆ ಬರಲಿದೆ. ಕೃಷ್ಣಾ ಮೂರನೆಯ ಹಂತದ ಕಾಮಗಾರಿಗೆ ಪ್ರತಿ ವರ್ಷ 40ಸಾವಿರ ಕೋಟಿ ರೂಪಾಯಿ ಕೊಡುತ್ತೇವೆ. ಇಂದು ರಾಜ್ಯಕ್ಕೆ ಅಮಿತ್ ಷಾ ಬಂದಿದ್ದಾರೆ. ಅವರು ಕೃಷ್ಣಾ ಮತ್ತು ಮಹದಾಯಿ ನೀರಿನ ಬಗ್ಗೆ ಮಾತನಾಡಲ್ಲ. ಯಾಕಂದ್ರೆ ಅವರ ಮನಸ್ಸಲ್ಲಿ ಕಳ್ಳನಿದ್ದಾನೆ. ಅಮಿತ್ ಶಾ ಮತ್ತು ನರೇಂದ್ರ ಮೋದಿಯವರು ಕೃಷ್ಣಾ ಮತ್ತು ಮಹದಾಯಿ ನೀರಿನ ಹಕ್ಕಿನಿಂದ ಕರ್ನಾಟಕದ ಜನರನ್ನು ದೂರ ಇಟ್ಟಿದ್ದಾರೆ. ಕರ್ನಾಟಕದ ಜನರು ಬಿಜೆಪಿಯವರ ವಂಚನೆಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಮಹದಾಯಿ ವಿಚಾರದಲ್ಲಿ ಬಿಜೆಪಿಯವರು 8 ವರ್ಷಗಳಿಂದ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಜನವರಿ 2ರಂದು ಹುಬ್ಬಳ್ಳಿಯಲ್ಲಿ ಮಹದಾಯಿಗಾಗಿ ಹೋರಾಟ ನಡೆಯಲಿದೆ ಎಂದು ತಿಳಿಸಿದ್ರು.  ಇದನ್ನು ಓದಿ :- ತ್ರಿಬಲ್ ಇಂಜಿನ್ ಸರ್ಕಾರ ಜನರಿಗೆ ನ್ಯಾಯ ಒದಗಿಸಬೇಕು – ಡಿ.ಕೆ ಶಿವಕುಮಾರ್

Siddaramaiah, Shivakumar summoned for violating Covid rules at Mekedatu  rally | Bengaluru - Hindustan Times
ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ( siddaramaiah) ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ. 3 ತಿಂಗಳ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮುಂದಿನ ಕಾಂಗ್ರೆಸ್ ಸರ್ಕಾರ ಮಹದಾಯಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ಕೊಡಲಿದೆ. ಮೊದಲ ಕ್ಯಾಬಿನೆಟ್ ನಲ್ಲಿ ಐದು ನೂರು ಕೋಟಿ ರೂಪಾಯಿ ಬಿಡುಗಡೆ ಮಾಡುತ್ತೇವೆ. ಇದು ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ತಿಳಿಸಿದ್ರು.

ಇದನ್ನು ಓದಿ :-  ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು 6.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ – ಪ್ರತಾಪ್ ರೆಡ್ಡಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!