ಧಾರವಾಡ ( DHARWAD ) ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿಯೊಂದು BRTS ಬ್ಯಾರಿಕೇಡ್ ಗೆ ಗುದ್ದಿದ್ದು, ಅನಾಹುತವೊಂದು ತಪ್ಪಿದಂತಾಗಿದೆ.
ಹುಬ್ಬಳ್ಳಿ ಕಡೆಗೆ ಹೊರಟಿದ್ದ ಈ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಗುದ್ದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಘಟನೆಯಿಂದ ಸಂಚಾರ ದಟ್ಟನೆ ಉಂಟಾಗಿದ್ದು, ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಲಾರಿ ತೆರವು ಕಾರ್ಯ ನಡೆಸಿದರು.
ಇದನ್ನು ಓದಿ :- ತ್ರಿಬಲ್ ಇಂಜಿನ್ ಸರ್ಕಾರ ಜನರಿಗೆ ನ್ಯಾಯ ಒದಗಿಸಬೇಕು – ಡಿ.ಕೆ ಶಿವಕುಮಾರ್