ಕಲಬುರಗಿ (Kalaburagi) ಜಿಲ್ಲೆಯಲ್ಲಿ ಎರಡು ಕಡೆ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ (Modi) ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ಯಾದಗಿರಿಯ ಕೊಡೆಕಲ್ ಗ್ರಾಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲಿಂದ ಎರಡು ಗಂಟೆಗೆ ಸೇಡಂ (Sedum) ತಾಲೂಕಿನ ಮಳಖೇಡಕ್ಕೆ ಆಗಮಿಸಲಿದ್ದಾರೆ. ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 4 ಕ್ಕೆ ಕಲಬುರ್ಗಿ ವಿಮಾನ ನಿಲ್ದಾಣದಿಂದ ಮೋದಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಇದನ್ನು ಓದಿ :- ಎಸ್.ಆರ್ ಪಾಟೀಲ್- ನಡುವಿನ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದ ಸಿದ್ದರಾಮಯ್ಯ
ಮೋದಿಗೆ ಸಿಎಂ ಬೊಮ್ಮಾಯಿ (Bommai) ,ರಾಜ್ಯ ಪಾಲರು ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸಾಥ್ ನೀಡಲಿದ್ದಾರೆ. ಮೋದಿ ಆಗಮನ ಹಿನ್ನೆಲೆಯಲ್ಲಿ 9 ಐಪಿಎಸ್ ,13 ಡಿಎಸ್ ಪಿ,30 ಸಿಪಿಐ,108 ಪಿಎಸ್ ಐ,16 ಕೆಎಸ್ ಆರ್ ಪಿ ತುಕಡಿ,6 ಡಿಎಆರ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ ಗರುಡಾ ಪೋರ್ಸ್ ನಿಯೋಜನೆ ಮಾಡಲಾಗಿದೆ.
ಇದನ್ನು ಓದಿ :- ಹರಿಪ್ರಸಾದ್ ಅವರೇ ನೀವು ಯಾವ ಸೀಮೆ ನಾಯಕರು ? ಶ್ರೀರಾಮುಲು ಪ್ರಶ್ನೆ