ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯೋದು ಪಕ್ಕಾ- ಖಾಸಗಿ ಸಂಸ್ಥೆಯ ಸಮೀಕ್ಷೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಲಿದ್ದು, ಕಾಂಗ್ರೆಸ್ 108 ರಿಂದ 114, ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳಲ್ಲಿ ಗೆಲವು ಸಾಧಿಸಬಹುದು ಎಂದು ಹೈದರಬಾದ್ ಮೂಲದ ಖಾಸಗಿ ಸಂಸ್ಥೆಯೊಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ.

ಮುಂಬರುವ ವಿಧಾನಸಭಾ ಚುನಾವಣೆ (Vidhanasabha election) ಯಲ್ಲಿ ಕಾಂಗ್ರೆಸ್ (Congress) ಆಡಳಿತದ ಚುಕ್ಕಾಣಿ ಹಿಡಿಯಲಿದ್ದು, ಕಾಂಗ್ರೆಸ್ 108 ರಿಂದ 114, ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳಲ್ಲಿ ಗೆಲವು ಸಾಧಿಸಬಹುದು ಎಂದು ಹೈದರಬಾದ್ (Hyderabad) ಮೂಲದ ಖಾಸಗಿ ಸಂಸ್ಥೆಯೊಂದು ಸಮೀಕ್ಷಾ ವರದಿಯಲ್ಲಿ ತಿಳಿಸಿದೆ. ಕಾಂಗ್ರೆಸ್ 108 ರಿಂದ 114, ಬಿಜೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳಲ್ಲಿ ಗೆಲವು ಸಾಧಿಸಬಹುದು ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.

ಖಾಸಗಿ ಸಹಭಾಗಿತ್ವದ ಎಸ್ಎಎಸ್ ಮತ್ತು ಐಪಿಎಸ್ಎಸ್ ಸಂಸ್ಥೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿದ್ದು, ನವೆಂಬರ್ 20 ರಿಂದ ಜನವರಿ12ರ ವರೆಗೆ ಸಮೀಕ್ಷೆ ನಡೆಸಿ ಮುಂಬರುವ ಚುನಾವಣೆ (Election) ಯಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು, ಕಾಂಗ್ರೆಸ್ ಸೋಲಿಸಬಹುದು ಎಂದಿದೆ. ಸಮೀಕ್ಷೆ ವರದಿ ಪ್ರಕಾರ ಕಾಂಗ್ರೆಸ್ನ ಮತಗಳು ಶೇ 38.14 ರಿಂದ 40 ಪ್ರತಿಶತದಷ್ಟು ಹೆಚ್ಚಾಗಬಹುದು.

 

ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 13-14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೇ, ಬಿಜೆಪಿಯ 9-10 ಮತ್ತು ಜೆಡಿಎಸ್ನ 1-2 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಹೇಳಿದೆ. ಒಕ್ಕಲಿಗರ ಭದ್ರಕೋಟೆಯಾದ ಹಳೇ ಮೈಸೂರು ಭಾಗದ 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ 24 ರಿಂದ 25 ಕ್ಷೇತ್ರಗಳಲ್ಲಿ, ಬಿಜೆಪಿ 10-14, ಜೆಡಿಎಸ್ (JDS) 20 ರಿಂದ 21 ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಲಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚಿದ್ದು 44 ಕ್ಷೇತ್ರಗಳಲ್ಲಿ ಕಾಂಗ್ರೆಸ್ 27-28 ಕ್ಷೇತ್ರ, ಬಿಜೆಪಿ 14-16 ಕ್ಷೇತ್ರ, ಜೆಡಿಎಸ್ 1-2 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಹೈದರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ 21-22, ಬಿಜೆಪಿ 12-14 ಮತ್ತು ಜೆಡಿಎಸ್ 1-3 ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಲಿದೆ.

Bharatiya Janata Party | History, Ideology, & Beliefs | Britannica

ಕರಾವಳಿ ಕರ್ನಾಟಕದಲ್ಲಿ ಬಿಜೆಪಿ (BJP) ಯ ಅಲೆ ಚೆನ್ನಾಗಿದ್ದು, 19 ಕ್ಷೇತ್ರಗಳಲ್ಲಿ 12-13, ಕಾಂಗ್ರೆಸ್ 7-8 ಮತ್ತು ಜೆಡಿಎಸ್ ಖಾತೆ ತೆರಯುವುದಿಲ್ಲ ಎಂದು ವರದಿಯಲ್ಲಿ ಹೇಳಿದೆ.

ಹಾಗೇ ಮಧ್ಯ ಕರ್ನಾಟಕದಲ್ಲಿ ಕಾಂಗ್ರೆಸ್ 16-17 ಕ್ಷೇತ್ರಗಳಲ್ಲಿ, ಬಿಜೆಪಿ 8-9 ಮತ್ತು ಜೆಡಿಎಸ್ 0-1 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ.  ಇದನ್ನು ಓದಿ :- ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಸತ್ಯ – ಸಿದ್ದರಾಮಯ್ಯ 

Karnataka mining baron Gali Janardhan Reddy floats his own party: 'New episode' | Bengaluru - Hindustan Times

ಬಿಜೆಪಿಯಿಂದ ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ಹೊಸ ಪಕ್ಷ ಸ್ಥಾಪಿಸಿರುವ ಜನಾರ್ದನ ರೆಡ್ಡಿ (Janardhran reddy) ಕೊಪ್ಪಳ, ಗಣಗಾವತಿ, ಬಳ್ಳಾರಿ, ದಾವಣಗೆರೆ ಮತ್ತು ರಾಯಚೂರು 5 ಕ್ಷೇತ್ರಗಳಲ್ಲಿ ನಿರ್ಣಾಯಕವಾಗಲಿದೆ. ಎಐಎಂಐಎಂ ಸ್ಪರ್ಧಿಸಿದರೇ ರಾಜ್ಯದಾದ್ಯಂತ 6 ರಿಂದ 7 ಸ್ಥಾನಗಳಲ್ಲಿ ಗೆಲವು ಸಾಧಿಸುವ ಸಾಧ್ಯತೆ ಇದೆ.
ಎಸ್ಸಿ, ಎಸ್ಟಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಂದ ಕಾಂಗ್ರೆಸ್ ಗರಿಷ್ಠ ಮತಗಳನ್ನು ಪಡೆಯಲಿದೆ. ಈ ನಡುವೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಒಕ್ಕಲಿಗರು ಒಡೆದು ಹೋಗಲಿದ್ದು, ಕೇವಲ 10 ಪ್ರತಿಶತದಷ್ಟು ಜನರು ಬಿಜೆಪಿಗೆ ಮತ ಹಾಕುವ ನಿರೀಕ್ಷೆಯಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

ಇದನ್ನು ಓದಿ :-  ಜೆ ಪಿ ನಡ್ಡಾ ಕಾರ್ಯಕ್ರಮಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಗೈರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!