ನವಭಾರತಕ್ಕಾಗಿ ನವ ಕರ್ನಾಟಕ ಧ್ಯೇಯದೊಂದಿಗೆ ಗಣರಾಜ್ಯೋತ್ಸವ ಆಚರಣೆ – ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮವಹಿಸಲಾಗುತ್ತಿದೆ.

ರಾಜ್ಯ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮವಹಿಸಲಾಗುತ್ತಿದೆ. ನವಭಾರತಕ್ಕಾಗಿ ನವ ಕರ್ನಾಟಕ ಧ್ಯೇಯದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯ ಅಮೃತಮಹೋತ್ಸದಡಿ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ( THAWAR CHAND GELHOT ) ಹೇಳಿದ್ದಾರೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡದಲ್ಲಿ ರಾಜ್ಯದ ಜನತೆಗೆ ಗಣರಾಜ್ಯೋತ್ಸವ ಶುಭಾಶಯಗಳು ತಿಳಿಸಿದರು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 6,478.76 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಯೋಜನೆಯಡಿ 13.47 ಕೋಟಿ ದಿನಗೂಲಿ ಉದ್ಯೋಗ ಸೃಷ್ಟಿಸಲಾಗಿದೆ. ಕಾರ್ಮಿಕರ ಖಾತೆಗೆ 4,110 ಕೋಟಿ ನೇರವಾಗಿ ಜಮೆ ಮಾಡಲಾಗಿದೆ. 2022ರಲ್ಲಿ 13.35 ಲಕ್ಷ ಮನೆಗಳಿಗೆ ಮೂಲಸೌಕರ್ಯ ಕಲ್ಪಿಸಲಾಗಿದೆ. ಇದಕ್ಕಾಗಿ 2314.34 ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನು ಓದಿ :- ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ ಧ್ವಜಾರೋಹಣ

ಕಂದಾಯ ಗ್ರಾಮಗಳ ಘೋಷಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. 2020-23ರ ಸಾಲಿನಲ್ಲಿ 20.19 ಲಕ್ಷ ರೈತರಿಗೆ ಬೆಳೆ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ 15,066 ಕೋಟಿ ಬೆಳೆ ಸಾಲ ನೀಡಲಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ಸಾಲ ನೀಡಲಾಗುವುದು. ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ಟ್ರಸ್ಟ್ ನಡಿ 32.32 ಲಕ್ಷ ನೋಂದಣಿಗಳಾಗಿವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ :-  ಎಸ್ಟಿ ಮೀಸಲಾತಿಗಾಗಿ ಚಳ್ಳಕೆರೆಯಲ್ಲಿ ಕಾಡುಗೊಲ್ಲರಿಂದ ಬೃಹತ್ ಪ್ರತಿಭಟನೆ- ಬೇಡಿಕೆ ಈಡೇರದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!