ಮಂಗಳೂರು (Mangalore) ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ವರದಿ ನೀಡುವಂತೆ ಎನ್.ಶಶಿಕುಮಾರ್ (N.shashikumar) ಅವರನ್ನು ಲೋಕಾಯುಕ್ತರು ಕೇಳಿದ್ದಾರೆ.
2022ರ ಡಿಸೆಂಬರ್‌ನಲ್ಲಿ ಲೋಕಾಯುಕ್ತ (Lokhayuktha) ಕ್ಕೆ ಉಳ್ಳಾಲ ನಿವಾಸಿ ಮೊಹಮ್ಮದ್ ಕಬೀರ್ ದೂರು ನೀಡಿದ್ದರು. ಕಬೀರ್ ತಮ್ಮ ದೂರಿನಲ್ಲಿ ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್ ಸಂದೀಪ್ ಜಿಎಸ್ ಮತ್ತು ಪಿಎಸ್‌ಐ ಪ್ರದೀಪ್ ಅವರು ಗಾಂಜಾ ಮತ್ತು ಮರಳು ಮಾಫಿಯಾ ಮತ್ತು ಹೋಟೆಲ್ ಮಾಲೀಕರಿಂದ ಲಂಚ ವಸೂಲಿ ಮಾಡುವ ಮೂಲಕ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಶಶಿಕುಮಾರ್ ಅವರು ಪೊಲೀಸ್ ಕಮಿಷನರ್ (Police commissioner) ಆಗಿ ಅಧಿಕಾರ ವಹಿಸಿಕೊಂಡ ನಂತರ ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ದೂರಿದ್ದರು. ಈ ಕುರಿತು ಮುಖ್ಯ ಕಾರ್ಯದರ್ಶಿ, ಡಿಜಿಪಿ, ಲೋಕಾಯುಕ್ತ, ಎಸಿಬಿ, ಎಡಿಜಿಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಕಬೀರ್ ಹೇಳಿದ್ದಾರೆ. ಇದನ್ನು ಓದಿ :- ಬಿಜೆಪಿ ಮತ್ತೆ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಡೆಯಲಾಗುವುದಿಲ್ಲ – ಬಿ.ಎಸ್ ಯಡಿಯೂರಪ್ಪ
ಕ್ರಮದ ಬದಲಾಗಿ ತನಗೆ ಬೆದರಿಕೆ ಕರೆಗಳು ಬರಲಾರಂಭಿಸಿತ್ತು. ಅಲ್ಲದೆ ಪೊಲೀಸರು ಪದೇ ಪದೇ ವಿಚಾರಣೆಗೆ ಒಳಪಡಿಸಿದರು ಎಂದು ದೂರಿದ್ದಾರೆ. ಲೋಕಾಯುಕ್ತರು ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ಆರೋಪಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರ (Corruption) ದ ಪ್ರಕರಣದ ಬಗ್ಗೆ ತನಿಖೆ ನಡೆಸುವುದು ಸೂಕ್ತ ಎಂದು ಹೇಳಿದರು. ಇನ್ನುಳಿದಂತೆ ದೂರನ್ನು ಪರಿಶೀಲಿಸಿ ವರದಿ ಸಲ್ಲಿಸುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾನು ದಕ್ಷಿಣ ಎಸಿಪಿಯಿಂದ ತನಿಖೆಯ ವರದಿಯನ್ನು ಕೇಳಿದ್ದು ಅದನ್ನು ಸಲ್ಲಿಸಲಾಗುವುದು ಎಂದಿದ್ದಾರೆ.
ಇದನ್ನು ಓದಿ :- ಕಾಂಗ್ರೆಸ್ ನವರು ಬರೀ ಸುಳ್ಳು ಹೇಳ್ತಾರೆ – ಪ್ರಹ್ಲಾದ್ ಜೋಶಿ