19 ವರ್ಷದೊಳಗಿನ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಫೈನಲ್ ನಲ್ಲಿ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಇಂಗ್ಲೆಂಡ್ ವಿರುದ್ಧ 7 ವಿಕೆಟ್ ಅಂತರದಿಂದ ಗೆಲುವು ಸಾಧಿಸಿದೆ.
🫡💪🙌#TeamIndia CHAMPIONS pic.twitter.com/B4OM8unDr5
— BCCI Women (@BCCIWomen) January 29, 2023
ಈ ಮೂಲಕ ಇದೇ ಮೊದಲ ಬಾರಿ ಆಯೋಜನೆಗೊಂಡಿರುವ ಐಸಿಸಿ ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಎತ್ತಿ ಹಿಡಿದಿದೆ.ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 17.1 ಓವರ್ಗಳಲ್ಲಿ 68 ರನ್ ಗಳಿಸಿ ಆಲೌಟ್ ಆಯಿತು. ಇದನ್ನು ಓದಿ :- ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಇತಿಹಾಸ – ನಂಬರ್ 1 ಪಟ್ಟಕ್ಕೇರಿದ ಟೀಂ ಇಂಡಿಯಾ
69 ರನ್ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ 14 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಭಾರತದ ಪರ ಗೊಂಗಡಿ ತ್ರಿಷಾ 24, ಸೌಮ್ಯ ತಿವಾರಿ ಔಟಾಗದೆ 24 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
Congratulations to the Indian Team for a special win at the @ICC #U19T20WorldCup. They have played excellent cricket and their success will inspire several upcoming cricketers. Best wishes to the team for their future endeavours. https://t.co/BBn5M9abHp
— Narendra Modi (@narendramodi) January 29, 2023
ಮೋದಿ ಶುಭಾಶಯ :-
ಐಸಿಸಿ (ICC)ಅಂಡರ್-19 ಮಹಿಳಾ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ವಿಶೇಷ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮ ಆಟಗಾರ್ತಿಯರು ಅತ್ಯುತ್ತಮ ಆಟವಾಡಿದ್ದಾರೆ. ಇವರ ಯಶಸ್ಸು ಮುಂಬರುವ ಆಟಗಾರ್ತಿಯರಿಗೆ ಸ್ಫೂರ್ತಿ ನೀಡುತ್ತದೆ. ತಂಡದ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನು ಓದಿ :- ಅದ್ದೂರಿಯಾಗಿ ನಡೆಯಿತು ಅಥಿಯಾ ಶೆಟ್ಟಿ- ಕೆ.ಎಲ್ ರಾಹುಲ್ ಮದುವೆ…!