ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (NIRMALA SEETHRAMAN) 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ 7 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯ್ತಿ ನೀಡಿದ್ದಾರೆ.
बजट खत्म हुआ
Claim Reality pic.twitter.com/MEDSXINZHR
— Congress (@INCIndia) February 1, 2023
ಸಂಸತ್ತಿನಲ್ಲಿ ನಿರ್ಮಾಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣ ಮುಕ್ತಾಯಗೊಳಿಸುತ್ತಿದ್ದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರ ಆಕಾಶದೆತ್ತರಕ್ಕೆ ಭರವಸೆಗಳನ್ನು ನೀಡುತ್ತದೆ. ಆದರೆ ಜಾರಿಗೊಳಿಸುವುದು ಮಾತ್ರ ಶೂನ್ಯ ಎಂಬ ಅರ್ಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ಮಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿದೆ.
“ಬಜೆಟ್ ಖತಮ್ ಹುವಾ. ರಿಯಾಲಿಟಿ, ಕ್ಲೈಮ್” ಎಂದು ಬರೆದು ಪ್ರಧಾನಿ ಮೋದಿ ಅವರ ಚಿತ್ರವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಬಜೆಟ್ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದ್ದು, 2024 ರ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗುವುದರಿಂದ ಈ ಬಜೆಟ್ ಹೆಚ್ಚು ಮಹತ್ವವ ಪಡೆದುಕೊಂಡಿದೆ. ಇದನ್ನುಓದಿ :- ಪ್ರಹ್ಲಾದ್ ಜೋಶಿ ಗಿಫ್ಟ್ ನೀಡಿದ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಸರಕಾರದ ಬಜೆಟ್ "ಸೀಡ್ಲೆಸ್ ಕಡಲೆಕಾಯಿ" ಇದ್ದಂತಿದೆ!
'20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ!
ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ.ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ.
— Karnataka Congress (@INCKarnataka) February 1, 2023
ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ @BJP4Karnataka ಉತ್ತರಿಸಬೇಕು. ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?
ಕೇಂದ್ರ ಸರಕಾರದ ಬಜೆಟ್ "ಸೀಡ್ಲೆಸ್ ಕಡಲೆಕಾಯಿ" ಇದ್ದಂತಿದೆ!
'20 ಲಕ್ಷ ಕೋಟಿ ಪ್ಯಾಕೇಜ್' ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ!
ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ.ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ.
— Karnataka Congress (@INCKarnataka) February 1, 2023
ಕೇಂದ್ರ ಸರಕಾರದ ಬಜೆಟ್ “ಸೀಡ್ಲೆಸ್ ಕಡಲೆಕಾಯಿ” ಇದ್ದಂತಿದೆ! ’20 ಲಕ್ಷ ಕೋಟಿ ಪ್ಯಾಕೇಜ್‘ ಎಂಬ ಬಿಳಿಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ! ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ ಎಂದು ಹೇಳಿದೆ.
ಇದನ್ನುಓದಿ :- ಬಜೆಟ್ ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 5.93 ಲಕ್ಷ ಕೋಟಿ ರೂ ಘೋಷಿಸಿದ ನಿರ್ಮಲಾ ಸೀತಾರಾಮನ್