ನೆಲಮಂಗಲ (Nelamangala) ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆಯೋಜಿಸಿದ್ದ ‘ಭಾರತ ಇಂಧನ ಸಪ್ತಾಹ-2023’ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿದರು.
ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಶ್ರೀ @narendramodi ಯವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಲೋಕಾರ್ಪಣೆಗೈದ ಇಂಡಿಯನ್ ಆಯಿಲ್ ಕಂಪನಿ#IndiaEnergyWeek #IndiaDrivesE20 pic.twitter.com/zwxoJDWnGa
— Pralhad Joshi (@JoshiPralhad) February 6, 2023
ಈ ವೇಳೆ ಏಕಬಳಕೆ ಪೆಟ್ ಬಾಟಲ್ ಮರು ಬಳಸಿ ತಯಾರಿಸಿದ ಜಾಕೆಟ್ (Jacket) , ಸೋಲಾರ್ ಕುಕ್ ಟಾಪ್ ಬಿಡುಗಡೆ ಮಾಡಿದ ಅವರು, ಹಸಿರು ಇಂಧನ ಮೂಲದಿಂದ ಚಾಲಿತ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ನರೇಂದ್ರ ಮೋದಿಯವರಿಗೆ ಇಂಡಿಯನ್ ಆಯಿಲ್ನ ಅಧ್ಯಕ್ಷರು ತ್ಯಾಜ್ಯ ಪೆಟ್ ಬಾಟಲಿಗಳಿಂದ ತಯಾರಿಸಿದ ಪೇಟ ಮತ್ತು ಹಾಫ್ ಕೋಟ್ ಉಡುಗೊರೆಯಾಗಿ ನೀಡಿದರು. ಇದನ್ನೂ ಓದಿ : – ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಪ್ರಜಾಧ್ವನಿ ಯಾತ್ರೆ
ಪ್ಲಾಸ್ಟಿಕ್ (Plastic) ತ್ಯಾಜ್ಯದಿಂದ ತಯಾರಿಸಲ್ಪಟ್ಟ ಸಮವಸ್ತ್ರವನ್ನು ಮೋದಿ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಇಂಡಿಯನ್ ಆಯಿಲ್ ಕಂಪನಿ ಲೋಕಾರ್ಪಣೆ ಮಾಡಿತು. ಬಳಿಕ ಪರಿಸರ ಇಂಧನದ ಹಲವು ಸಾಧ್ಯತೆಗಳನ್ನು ಬಿಂಬಿಸುವ ಸಾಕ್ಷ್ಯಚಿತ್ರವನ್ನು ಸಮಾವೇಶದಲ್ಲಿ ಪ್ರದರ್ಶಿಸಲಾಯಿತು. ಬಳಿಕ ಮೋದಿಯವರು ಅಡುಗೆಮನೆಗಳಲ್ಲಿ ಸುಲಭವಾಗಿ ಬಳಸಲು ಸಾಧ್ಯವಿರುವ ವಿಶಿಷ್ಟ ಟ್ವಿನ್ ಕುಕ್ಟಾಪ್ ಸೋಲಾರ್ ಕುಕ್ಕರ್ ಒಂದನ್ನು ಅನಾವರಣಗೊಳಿಸಿದರು. ಇದೇ ವೇಳೆ ಗ್ರೀನ್ ಮೊಬಿಲಿಟಿ ರ್ಯಾಲಿಗೂ ಮೋದಿ ಚಾಲನೆ ನೀಡಿದರು.
ಇದನ್ನೂ ಓದಿ : – ಬೆಳಗಾವಿ ಮೇಯರ್ ಚುನಾವಣೆ- ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಬಿಜೆಪಿ ರಣತಂತ್ರ