ಪವರ್ ಪಾಲಿಟಿಕ್ಸ್ ಬಿಟ್ಟು ವಾಸ್ತವಾಂಶದ ಮೇಲೆ ನಿರ್ಣಯಗಳನ್ನ ತೆಗೆದುಕೊಳ್ಳಬೇಕು ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ನ ನಾಯಕರಿಗೆ ಎಚ್ಚರಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್ ಉಚಿತ ಅಂತಾ ಘೋಷಣೆ ಮಾಡಿದ ಹಿನ್ನಲೆ ಬಸವರಾಜ ಬೊಮ್ಮಾಯಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಜನರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತೆ ಎಂಬ ಹುಸಿ ಭರವಸೆ ನೀಡಿ ಅವರಿಗೆ ವಂಚನೆ ಮಾಡ್ಬೇಡಿ ಅಂತಾ ಬೊಮ್ಮಾಯಿ ತಿಳಿಸಿದ್ದಾರೆ.
ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ ರಾಜ್ಯದಾದ್ಯಂತ ಸಂಚರಿಸ್ತಿದೆ. ಇನ್ನು ಇದೇ ಯಾತ್ರೆ ವೇಳೆ ಕಾಂಗ್ರೆಸ್ ನಾಯಕರು 3 ಗ್ಯಾರಂಟಿ ಯೋಜನೆಗಳನ್ನ ಕೂಡಾ ಘೋಷಿಸಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಮನೆಯೊಡತಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ಕೊಡೋದಾಗಿ ಘೋಷಿಸಿದ್ದಾರೆ. ಈ ಹಿನ್ನಲೆ ಕಾಂಗ್ರೆಸ್ ನೀಡ್ತಿರುವ ಸುಳ್ಳು ಆಶ್ವಾಸನೆಗಳನ್ನ ನಂಬಬೇಡಿ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗ್ಲೇ ನಾವು ಕುಠೀರ ಜ್ಯೋತಿ, ಭಯ ಜ್ಯೋತಿ ಯೋಜನೆಡಿ 40 ಯೂನಿಟ್ ವಿದ್ಯುತ್ ಉಚಿತ ಕೊಡ್ತಿದ್ದೇವೆ. ಗೃಹ ಬಳಕೆಯ ವಿದ್ಯುತ್ ಪ್ರಮಾಣ 50 ರಿಂದ 70 ಯೂನಿಟ್ ಮಾತ್ರ ಇರುತ್ತೆ. 200 ಅಥವಾ 200 ಯೂನಿಟ್ ವಿದ್ಯುತ್ ಎಲ್ಲೂ ಬಳಕೆಯಾಗಲ್ಲ. ಹೀಗಾಗಿ 200 ಯೂನಿಟ್ ಉಚಿತ ವಿದ್ಯುತ್ ಕೊಡ್ತೀವಿ ಅನ್ನೋದೆ ದೊಡ್ಡ ಮೋಸ ಅಂತಾ ಸಿಎಂ ಬೊಮ್ಮಾಯಿ ವಿವರಿಸಿದ್ದಾರೆ.
ಸೌಖ್ಯ, ಸೊರಬ