ಕಾಂಗ್ರೆಸ್ ಸರ್ಕಾರದ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ವಿಚಾರವನ್ನು ವಿಪಕ್ಷಗಳು ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ನಾವು ಕರೆಂಟ್ ಬಿಲ್ ಕಟ್ಟಲ್ಲ ನೀವು ಕರೆಂಟ್ ಬಿಲ್ ಕಟ್ಟಬೇಡಿ ಎಂದು ವಿಪಕ್ಷಗಳು ಕರೆ ಕೊಟ್ಟಿವೆ. ಕಾಂಗ್ರೆಸ್ ಗ್ಯಾರಂಟಿಯ ಕಾರ್ಡ್ ಗಳನ್ನೇ ಬಳಸಿಕೊಳ್ಳುತ್ತಿರುವ ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರುತ್ತಿದೆ. ಇದರ ನಡುವೆ ರಾಜ್ಯಾದ್ಯಂತ ಕರೆಂಟ್ ಬಿಲ್ ಕಟ್ಬೇಡಿ ಅಭಿಯಾನಕ್ಕೆ ವಿಪಕ್ಷಗಳು ಸಿದ್ದತೆ ನಡೆಸಿದೆ ಎನ್ನಲಾಗಿದೆ. ಉಚಿತ ವಿದ್ಯುತ್ ಯೋಜನೆ ಮಾತ್ರವಲ್ಲದೇ ಕಾಂಗ್ರೆಸ್ ನ ಐದು ಗ್ಯಾರೆಂಟಿ ಯೋಜನೆ ಈಡೇರಿಸುವಂತೆ ವಿಪಕ್ಷಗಳು ಪಟ್ಟು ಹಿಡಿದಿದೆ.ಅಂದು ಕಾಂಗ್ರೆಸ್ ನಾಯಕರು ಎಲ್ಲರಿಗೂ ಫ್ರೀ ಫ್ರೀ ಫ್ರೀ, ಎಂದು ಘೋಷಣೆ ಮಾಡಿದ್ರು ಈಗ ಎಲ್ಲಾ ಗ್ಯಾರಂಟಿ ಯೋಜನೆ ಕೊಡಲಿ ನೋಡಣ ಎಂದು ಕೇಸರಿ ಕಲಿಗಳು ಸವಾಲ್ ಹಾಕಿದ್ದಾರೆ.
ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಅತ್ತೆ, ತಾಯಿ, ಮಾವನ ಮನೆಗೆ, ದೇವಸ್ಥಾನಕ್ಕೆ ಹೋಗಲು ಬಸ್ ಫ್ರೀ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದ್ರೆ ಈವರೆಗೆ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಗ್ಯಾರಂಟಿ ಘೋಷಣೆ ಮಾಡುವಾಗ ಯೋಚನೆ ಮಾಡಿರಲಿಲ್ಲವಾ ಎಂದು ಆರ್ ಅಶೋಕ್ ಕಿಡಿಕಾರಿದ್ರು..ನಿರುದ್ಯೋಗಿ ಯುವಕರಿಗೆ ಭತ್ಯೆ ಕೊಡ್ತೀನಿ ಅಂದಿದ್ದೀರಿ. ಪಾಪ, ಎಷ್ಟೋ ಹುಡುಗರು ಉದ್ಯೋಗ ಇಲ್ಲದೇ ಅಲೆದು ಪಾಪ ಇವರಿಗೆ ಮತ ಹಾಕಿದ್ದಾರೆ. ಆದರೆ ಈ ವರ್ಷ ಪಾಸ್ ಆದವರಿಗೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಕಾರ್ಡ್ಗಳಿಗೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಗ್ಯಾರಂಟಿ ಕಾರ್ಡ್ಗೆ ಸಹಿ ಹಾಕಿದ್ದಾರೆ. ಹಾಗಾಗಿ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಿಲ್ಲ ಎಂದ್ರು…
ಇನ್ನೂ ಇದೆ ವೇಳೆ ಆರ್ ಎಸ್ ಎಸ್ ಮತ್ತು ಭಜರಂಗ ದಳ ಬ್ಯಾನ್ ಮಾಡ್ತಿವಿ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಅಪ್ಪ, ಅಜ್ಜಿ, ಮುತ್ತಾತ್ತನ ಕೈಯಲ್ಲೇ ಆಗಿಲ್ಲ.ಇವಾಗ ದೇಶದಲ್ಲಿ ನಿಮ್ಮ ಸರ್ಕಾರ ನೆಗೆದು ಬಿದ್ದಿದೆ. ಇವಾಗ ತಾಕತ್ ಧಮ್ ಇದ್ರೆ, ಬಜರಂಗ ದಳ ಆಗಲಿ ಆಥವಾ ಒಂದು ಆರ್ಎಸ್ಎಸ್ ಶಾಖೆಯನ್ನು ಬ್ಯಾನ್ ಮಾಡಿ. ಬ್ಯಾನ್ ಮಾಡಿದ ಮೂರು ತಿಂಗಳಿಗೆ ನಿಮ್ಮ ಸರ್ಕಾರ ಇರಲ್ಲ..ನಿಮ್ಮ ಗೂಟದ ಕಾರುಗಳೆಲ್ಲ ಎಲ್ಲವೂ ವಾಪಸ್ಸು ಹೋಗಬೇಕು. ಈ ದೇಶದ ಪ್ರಧಾನಿಗಳು ಆರ್ಎಸ್ಎಸ್ನವರು. ಆರ್ಎಸ್ಎಸ್ ಒಂದು ಹಿಂದೂಗಳ ಧ್ವನಿ ಎಂದು ಆರ್ ಅಶೋಕ್ ಗುಡುಗಿದ್ರು.
ವರದಿ : ರೇಣುಕಾ ಕೆ, ರಾಜಕೀಯ ವರದಿಗಾರರು