Crime News

ಮರ್ಯಾದೆಗೆ ಅಂಜಿ ಮಗಳನ್ನೇ ಹತ್ಯೆ ಮಾಡಿದ ತಂದೆ…

ಕೋಲರದ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದೆ ಹತ್ಯೆ ನಡೆದಿದೆ. ಮಗಳು ಪರಿಶಿಷ್ಟ ಜಾತಿಯ ಹುಡುಗನನ್ನು ಪ್ರೀತಿಸಿದ ಕಾರಣಕ್ಕೆ ತಂದೇಯೇ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ವಿಷಯ ತಿಳಿದ ಯುವತಿಯ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ.

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದ ಹತ್ಯೆ ನಡೆದಿದ್ದು, ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ತಂದೆಯೇ ಮಗಳ ಹತ್ಯೆ ಮಾಡಿದ್ದಾನೆ. ಕೊಲೆಯಾದ ಯುವತಿ ಕೀರ್ತಿ. ಮತ್ತೊಂದು ಕಡೆ ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ಗಂಗಾಧರ್ ಕೂಡ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೌದು, ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ ವಿಚಾರ ತಿಳಿದು ಯುವತಿ ತಂದೆ ಕತ್ತು ಹಿಸುಕಿ ಸಾಯಿಸಿರುವ ಘಟನೆ ನಡೆದಿದ್ದು, ಆರೋಪಿ ಯುವತಿ ತಂದೆ ಕೃಷ್ಣಮೂರ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಲೆಯಾದ ಯುವತಿ ಕೋಲಾರ ಜಿಲ್ಲೆಯ ಕೆಜಿಎಫ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಮೃತ ಪ್ರಿಯಕರ ಗಂಗಾಧರ್ ಪಿಯುಸಿಯಲ್ಲೇ ಅನುತ್ತೀರ್ಣನಾಗಿದ್ದು, ಗಾರೆ ಕೆಲಸ ಮಾಡುತ್ತಿದ್ದ. ಇಬ್ಬರ ಮನೆ ಕೂಡ ಒಂದೇ ಕಡೆಯಿದ್ದು, ಪ್ರೀತಿಸಲು ಶುರು ಮಾಡಿದ್ದರು, ಅಷ್ಟೇ ಅಲ್ಲದೇ ಮುಂದೆ ಮದುವೆಯನ್ನು ಸಹ ಆಗಲು ನಿರ್ಧಾರಿಸಿದ್ದರು.

ಆದರೆ ಈ ವಿಷಯ ಯುವತಿ ತಂದೆಗೆ ತಿಳಿದು ಸೋಮವಾರ ರಾತ್ರಿ ಮನೆಯಲ್ಲಿ ಜಗಳ ನಡೆದಿದೆ. ಈ ವೇಳೆ ಯುವತಿ ಅವನನ್ನೇ ಮದುವೆಯಾಗುವುದಾಗಿ ಹಟ ಮಾಡಿದ್ದಾಳೆ. ಇದರಿಂದ ಕೋಪಗೊಂಡ ತಂದೆ ಮಂಗಳವಾರ ಬೆಳಗಿನ ಜಾವ ಮಗಳನ್ನು ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!