ಹಿರೇಕೋಡಿ : ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ಹೌದು, ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರು ಜುಲೈ 6ರಿಂದ ನಾಪತ್ತೆಯಾಗಿದ್ದರು. ಜುಲೈ 6ರಂದು ಇಡೀ ದಿನ ಆಶ್ರಮದ ಸುತ್ತಮುತ್ತ ಭಕ್ತರು ಶೋಧ ನಡೆಸಿದ್ದಾರೆ. ಬಳಿಕ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾದ ಬಗ್ಗೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ದೂರು ನೀಡಿದ್ದರು. ಇದರ ಕುರಿತು ಮಾಹಿತಿ ತಿಳಿದ ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ ತಪ್ಪಿಸಿಕೊಳ್ಳಬಾರದು ಎಂದು ಅಧಿಕಾರಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.