ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದರು. ಅಂದ್ರೆ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡೋಕೆ ಸರ್ಕಾರ ನಿರ್ಧಾರ ಮಾಡಿದ್ದು, ಈ ನೇರ ನಗದು ವರ್ಗಾವಣೆಗೆ ಸಿಎಂ ಚಾಲನೆ ನೀಡಿದರು.
ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ
— Siddaramaiah (@siddaramaiah) July 10, 2023
'ಅನ್ನಭಾಗ್ಯ' ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.
ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ… pic.twitter.com/Gvrexdnlzk
ಬಳಿಕ ಮಾತನಾಡಿದ ಅವರು, ನಮ್ಮ 5 ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ. ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಯುಪಿಎ ಸರ್ಕಾರ. ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಈ ಕಾಯ್ದೆ ಜಾರಿ ತಂದಿದ್ದು ಅಂತಾ ಹೇಳಿದರು.
ಅಲ್ಲದೆ ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಮೊದಲ ಸಂಪುಟದಲ್ಲೇ 5 ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡ್ತೀವಿ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡ್ತೇವೆ ಅಂತಾ ಹೇಳಿದ್ದೆವು ಎಂದು ವಿಪಕ್ಷಗಳ ಟೀಕೆಗೆ ಟಾಂಗ್ ನೀಡಿದರು.