ದೇಶದಲ್ಲಿ ಕಳೆದ 24 ಗಂಟೆಯಲ್ಲಿ 68020 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 291 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ 1,20,39,144 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,61,843ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 32,321 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 1,13,55,993ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,21,808ಕ್ಕೆ ಏರಿಕೆ ಕಂಡಿದೆ.
ಪ್ರಸಕ್ತ ಸಾಲಿನಲ್ಲಿ ಪತ್ತೆಯಾದ ಅತ್ಯಧಿಕ ಸೋಂಕು ಪ್ರಕರಣ ಇದಾಗದ್ದು, ಇದುವರೆಗೆ 6,05,30,505 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.