ತುಮಕೂರು: ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಊರ್ಡಿಗೆರೆ ಹೋಬಳಿ ತಿಮ್ಮನಾಯಕನಹಳ್ಳಿ ಗ್ರಾಮದ 26 ವರ್ಷದ ಸೌಂದರ್ಯ ಮೃತ ಮಹಿಳೆ. ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
ಆಕೆ ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮಧ್ಯಾಹ್ನ ಸಮಯದಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಳೆ.
ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಆಕೆ ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಭಾವಿಸಿದ್ದರು.ಇಂದು ಬೆಳಗ್ಗೆ ಗ್ರಾಮಸ್ಥರು ಗೋಕಟ್ಟೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.ಈ ಪ್ರಕರಣವನ್ನು ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.