State News

ಸರ್ಕಾರದಿಂದ ಮಹಿಳೆಯರಿಗೆ ಬಿಗ್‌ ಶಾಕ್‌ : ಗೃಹಲಕ್ಷ್ಮಿ ಯೋಜನೆ ನೊಂದಣಿ ಸ್ಥಗಿತ

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

ಸರ್ಕಾರ ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ರೂ.2000 ಹಣ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗಿದ್ದರಿಂದ ಗೃಹ ಲಕ್ಷ್ಮಿ ಯೋಜನೆ’ಯ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತಗೊಂಡಿದೆ.

ನೋಂದಣಿಯಾದ ಎಲ್ಲಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಶೀಘ್ರವೇ ಅವಕಾಶ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆಮಾಡಿ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ ಒಟ್ಟು ಫಲಾನುಭವಿಗಳ ಸಂಖ್ಯೆ 1.28 ಕೋಟಿ ಆಗಿದೆ. ಆದರೆ, ಈವರೆಗೆ 1.13 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!