ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಯಕ್ಕೆ (ಇಡಿ) ದೂರು ಸಲ್ಲಿಕೆಯಾಗಿದೆ.
ಸಿಡಿ ಪ್ರಕರಣದಲ್ಲಿ ಹನಿಟ್ರ್ಯಾಪ್, ಒಳಸಂಚಿಗೆ 500 ಕೋಟಿ ರೂಪಾಯಿ ಅಕ್ರಮ ವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಶ್ರೀಧರ್ ಮೂರ್ತಿ ಎಂಬುವವರು ಡಿ ಕೆ ಶಿವಕುಮಾರ್ ಜೊತೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಸೇರಿ ಐವರ ವಿರುದ್ಧ ದೂರು ನೀಡಿದ್ದಾರೆ.
ಇಸಿಐಆರ್ ದಾಖಲಿಸಿಕೊಂಡು ಅಕ್ರಮ ವ್ಯವಹಾರ, ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸುವಂತೆ ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ದೂರು ನೀಡಿ, ಪ್ರಿವೆನ್ಷನ್ ಆಫ್ ಮನಿ ಲ್ಯಾಂಡ್ರಿಂಗ್ ಆ್ಯಕ್ಟ್ ಅಡಿ ತನಿಖೆಗೆ ಶ್ರೀಧರ್ ಮನವಿ ಮಾಡಿದ್ದಾರೆ.