Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿದ್ದರಾಮಯ್ಯ

ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೈಯದ್ ಅವರನ್ನು ಹಾಡಿಹೊಗಳಿದರು”ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತ ಅನೇಕ ಜಾತಿ, ಧರ್ಮ ಬಹುತ್ವ ಇರುವ ರಾಷ್ಟ್ರ. ಅದಕ್ಕಾಗಿ ಯೂನಿಟಿ ಇನ್ ಡೈವರ್ಸಿಟಿ ಕಾಣುತ್ತಿದ್ದೇವೆ. ಇದರಲ್ಲಿ ನಂಬಿಕೆ ಇಟ್ಟಿರುವವರಲ್ಲಿ ನಾಸಿರ್ ಹುಸೇನ್ ಅಂತ ಹೇಳಿದರ ಅತಿಶಯೋಕ್ತಿಯಲ್ಲ. ಸೆಕ್ಯೂಲರ್ ಆಗಿದ್ದರೆ ಮಾತ್ರ ಈ ದೇಶ ಉಳಿಯಲು ಸಾಧ್ಯ. ಕುವೆಂಪು ಅವರು ಒಂದು ಮಾತು ಹೇಳುತ್ತಾರೆ

ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!