State News

ರಾಜ್ಯದಲ್ಲಿ ಮತ್ತೆ ಕಾವೇರಿ ನೀರು ವಿವಾದ: ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತುಸಭೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಾವೇರಿ ನೀರು ವಿವಾದ ಭುಗಿಲೆದ್ದಿದೆ. ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸೆ.13 ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ಸಭೆ ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾವಹಿಸಲಿದ್ದಾರೆ.

ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಮಾಡದಿರುವ ಸಂಬಂಧ ಸಭೆಯಲ್ಲಿ ಎಲ್ಲರೂ ಸೇರಿ ತೀರ್ಮಾನ ಮಾಡಲಿದ್ದಾರೆ. ಜತೆಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಬಗ್ಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಇದೆ.

ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್‌ ಅವರು ದೆಹಲಿಗೆ ತೆರಳಲಿದ್ದು, ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿ ಮನವರಿಕೆ ಮಾಡಿ ಕೇಂದ್ರದ ಮಧ್ಯಪ್ರವೇಶಕ್ಕೆ ಒತ್ತಾಯಿಸುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!