ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಪತ್ನಿ ಚೆನ್ನಮ್ಮ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಗೆದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡ ಮತ್ತು ಚೆನ್ನಮ್ಮಾ ದಂಪತಿ ಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಸೋಮವಾರ ಡಿಸ್ಚಾರ್ಜ್ ಆದ ದೇವೇಗೌಡರನ್ನು ಆಸ್ಪತ್ರೆಯ ಸಿಬ್ಬಂದಿ ಹೂಹಾರ ಹಾಕಿ ಬೀಳ್ಕೊಟಿತು. ಮನೆಯಲ್ಲೇ ಕೆಲವು ದಿನ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.