ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬೆಂಜಮಿನ್ ನೆತನ್ಯಾಹು ಅವರ ವಿಚಾರಣೆ ಮತ್ತೆ ಆರಂಭವಾಗಿದೆ. ಕಳೆದ ಮಾರ್ಚ್ನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬೆಂಜಮಿನ್ ನೆತನ್ಯಾಹು ಅವರು ಸ್ಪಷ್ಟ ಬಹುಮತ ಗಳಿಸುವಲ್ಲಿ ವಿಫಲರಾಗಿದ್ದರು.
ಆದರೆ ಇಸ್ರೇಲ್ ಪ್ರಧಾನಿ ತಮ್ಮ ಮೇಲೆ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಅಲ್ಲಗಳೆದಿದ್ದಾರೆ. ಬೆಂಜಮಿನ್ ನೆತನ್ಯಾಹು ವಂಚನೆ ಮತ್ತು ಲಂಚ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.
ಬೆಂಜಮಿನ್ ನೆತನ್ಯಾಹು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಎಸಗಿದ್ದರು ಎಂಬ ಆರೋಪವಿದೆ, ಹೀಗಾಗಿ ಅವರ ಮೇಲಿನ ವಿಚಾರಣೆಯನ್ನು ಮತ್ತೆ ಆರಂಭಿಸಲಾಗುತ್ತಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.