ನವದೆಹಲಿ: ಕೋವಿಡ್-19 ಪರಿಸ್ಥಿತಿ ಮತ್ತು ಕೋವಿಡ್ ಲಸಿಕೆ ಕುರಿತಂತೆ ಸಮಾಲೋಚನೆ ನಡೆಸಲು ಎಲ್ಲ ರಾಜ್ಯದ ಮುಖ್ಯಮಂತ್ರಿಗಳೊಡನೆ ಸಭೆ ನಡೆಸಲಿದ್ದಾರೆ. ಏ.8ರಂದು ಈ ಸಂಬಂಧ ಸಭೆ ಕರೆಯಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸಭೆಯಲ್ಲಿ ಭಾಗಿಯಾಗಿದ್ದಾರೆ.
ರಾಜ್ಯಗಳಲ್ಲಿ ಪ್ರಸ್ತುತ ಕೋವಿಡ್ ಪರಿಸ್ಥಿತಿಯ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ.
ಇನ್ನು, ಏ.7ರಂದು ಪ್ರಧಾನಿ ಮೋದಿ ಪರೀಕ್ಷಾ ಪೆ ಚರ್ಚಾ ಸಂವಾದ ನಡೆಸಲಿದ್ದಾರೆ. ಈ ಸಂವಾದ ವರ್ಚುವಲ್ ಸಂವಾದ ಆಗಿರಲಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪರೀಕ್ಷಾ ಪೆ ಚರ್ಚಾ ಸಂವಾದವನ್ನು ಪ್ರಧಾನಿ ಮೋದಿ ಪ್ರತಿವರ್ಷ ನಡೆಸುತ್ತಾರೆ. ಈ ಸಂವಾದದ ಮೊದಲ ಆವೃತ್ತಿ 2018ರ ಫೆ. 16ರಂದು ನವದೆಹಲಿಯಲ್ಲಿ ನಡೆದಿತ್ತು.