ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ನಿನ್ನೆಗಿಂತ ಮತ್ತೊಮ್ಮೆ ಕಡಿಮೆಯಾಗಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 82.82 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 84.48 ಡಾಲರ್‌ಗೆ ಇಳಿದಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ತಿಳಿಯಿರಿ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆಯಲ್ಲಿ 57 ಪೈಸೆ ಇಳಿಕೆಯಾಗಿದೆ. ಇಲ್ಲಿ ಡೀಸೆಲ್ ಬೆಲೆ 55 ಪೈಸೆ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್ 48 ಪೈಸೆ ಮತ್ತು ಡೀಸೆಲ್ 45 ಪೈಸೆ ಅಗ್ಗವಾಗಿದೆ. ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಇಳಿಕೆಯಾಗಿದೆ. ಅದೇ ಸಮಯದಲ್ಲಿ, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸ್ವಲ್ಪ ಹೆಚ್ಚಳವಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.