ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇದನ್ನು ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ಬೆಂಗಳೂರಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ ತೆರಿಗೆ ವಿಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗಿತ್ತು.
ಇದೀಗ ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಜನರಿಗೆ ಯಾವುದೇ ಹೊಸ ಟ್ರಾಫಿಕ್ ಟ್ಯಾಕ್ಸ್ ಹಾಕುವುದಿಲ್ಲ. ಇರುವ ಟ್ಯಾಕ್ಸ್ ಸರಿಯಾಗಿ ಕಟ್ಟಬೇಕು ಎಂದು ಹೇಳಿದರು.
ಹಳ್ಳಿಗಳಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಳ್ಳಿಹಳ್ಳಿಗಳಲ್ಲಿ ಮದ್ಯದಂಗಡಿ ತೆರೆಯಲು ಆಗುವುದಿಲ್ಲ. ಎಲ್ಲವನ್ನೂ ನೋಡಬೇಕು, ಸ್ಟ್ರೀಮ್ ಲೈನ್ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಬಿಬಿಎಂಪಿ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ವಿಚಾರವಾಗಿ ಮಾತನಾಡಿದ ಅವರು ಆ ಭಾಗದ ಶಾಸಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ತನಿಖೆ ಮಾಡುವಂತೆ ಹೇಳಿದ್ದಾರೆ. ತಾವು, ಮಾಧ್ಯಮದವರು ಕೂಡ ಅವರ ಪರವಾಗಿ ಮಾತಾಡುತ್ತಿದ್ದೀರಿ ಒಳ್ಳೆದಾಗಲಿ ಎಂದು ಹೋದ್ರು.