ಬೆಂಗಳೂರು : ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ (Prof. Sukhdev Thorat) ಅವರ ಅಧ್ಯಕ್ಷತೆಯಲ್ಲಿ 15 ಮಂದಿಯ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನುರಚಿಸಿ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಒಟ್ಟು 15 ಸದಸ್ಯರನ್ನು ನೇಮಕ ಮಾಡಲಾಗಿದೆ. 8 ವಿಷಯ ತಜ್ಞರು, ಪ್ರೊ.ನಿರಂಜನಾರಾಧ್ಯ, ರಹಮತ್ ತರೀಕೆರೆ ಸೇರಿದಂತೆ ಪ್ರಮುಖ ಸಾಹಿತಿಗಳಿಗೂ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. 2024ರ ಫೆ.28ರೊಳಗೆ ವರದಿ ಸಲ್ಲಿಸುವಂತೆ ಆಯೋಗಕ್ಕೆ ಸರ್ಕಾರ ಸೂಚನೆ ನೀಡಿದೆ ಎಂದು ವರದಿಯಾಗಿದೆ.
ಸಿಎಂ ಸಿದ್ದರಾಮಯ್ಯ ಎಕ್ಸ್ :
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ ಮೂಲಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ. ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.
ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ಮೂಲಕ ಹಾರೈಸಿದ್ದಾರೆ.