ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಯೊಳಗೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (MLA Basanagouda Patil Yatnal) ಸ್ಪೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ.
ಇಂದು ಬರ ಅಧ್ಯಯನಕ್ಕಾಗಿ ಚಾಮರಾಜನಗರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬಿಜೆಪಿ ತಂಡ ಆಗಮಿಸಿದ್ದರು ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ,ಲೋಕಸಭಾ ಚುನಾವಣೆ ಬಳಿಕ ಅಥವಾ ಅದರಳೊಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ ಆಗಲಿದೆ. ಅಲ್ಲದೇ ಸಿದ್ದರಾಮಯ್ಯಗೆ ಖುರ್ಚಿ ಉಳಿಸಿಕೊಳ್ಳುವುದೇ ದೊಡ್ಡ ತಲೆನೋವಾಗಿದೆ.
ಬೆಳಗ್ಗೆ ಎದ್ದರೆ ಪ್ರಧಾನಿ ಬೈಯ್ಯೋದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲಸವಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿಗೆ ಒಂದು ವಾರ ಕಾಯುತ್ತಾರೆ. ಅಂತಹದಲ್ಲಿ ಪ್ರಧಾನಿ ಮೋದಿ ಭೇಟಿಗೆ ಒಂದು ದಿನ ಕಾದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.