ಉಡುಪಿ: ಅಂಬೇಡ್ಕರ್ ಭವನದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ತೆಂಕಭಿರ್ತಿಯಲ್ಲಿ ನಡೆದಿದೆ.
ಡಿಎಸ್ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಸೇರಿದಂತೆ ಮತ್ತಿತರರು ಯಾವುದೇ ಅನುಮತಿ ಪಡೆಯದೆ ಮದ್ಯ ಸೇವಿಸಿ ಪಾರ್ಟಿ ನಡೆಸಿದ್ದಾರೆ. ಡಿಎಸ್ ಎಸ್ ಮುಖಂಡ ಶ್ಯಾಮ ರಾಜ್ ಭಿರ್ತಿ ಅವರ ಮಗ ಕ್ರೀಡಾಕೂಟಕ್ಕೆ ಆಯ್ಕೆಯಾದ ಸಂಭ್ರಮಕ್ಕೆ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಗ್ರಂಥಾಲಯವನ್ನು ಒಳಗೊಂಡಿರುವ ಅಂಬೇಡ್ಕರ್ ಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಯಾವುದೇ ಪೂರ್ವಾನುಮತಿ ಇಲ್ಲದೆ ಜಿಲ್ಲಾ ಸಂಚಾಲಕ, ಡಿಎಸ್ಎಸ್ ಮುಖಂಡರು ಮತ್ತು ಸ್ಥಳೀಯರು ಎಣ್ಣೆ ಪಾರ್ಟಿ ಮಾಡಿದ್ದಾರೆ.