ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ವಿಚಾರವಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಂದೂಡಿದೆ.
ಸಿಬಿಐ ತನಿಖೆಗೆ ಬಿಎಸ್ ಯಡಿಯರೂಪ್ಪ ಸರ್ಕಾರ ಶಿಫಾರಸು ಮಾಡಿದ್ದನ್ನು ಡಿಕೆಶಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ ಡಿಕೆಶಿಗೆ ರಿಲೀಫ್ ನೀಡಿತ್ತು. ಹೈಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.
ಪ್ರಕರಣದ ಹಿನ್ನೆಲೆ?
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ (Income Tax) ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.