ಮಂಡ್ಯ: ಚುನಾವಣಾ ರಾಜಕೀಯದಿಂದ ಬಿಜೆಪಿ ಸಂಸದ ಡಿ.ವಿ ಸದಾನಂದಗೌಡ ಅವರು ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಚುನಾವಣೆಗೆ ನಿಲ್ಲದಂತೆ ನೇರವಾಗಿ ಕೇಂದ್ರ ಸೂಚಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ಇದಕ್ಕೆ ಸ್ವತಃ ಸದಾನಂದಗೌಡ ಮಾತನಾಡಿ, ಪಕ್ಷ ಏನಾದರೂ ಚಿರತೆ ಹೊಡಿಸುವಂತೆ ಹೇಳಿದರೂ ಸಹ ನಾನು ಅದನ್ನು ಮಾಡುತ್ತೇನೆ. ರಾಜಕೀಯ ನಿವೃತ್ತಿ ಹಿಂದೆ ಯಾರ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅವರು ಚುನಾವಣೆಗೆ ನಿಲ್ಲಲ್ಲ. ಪಕ್ಷದ ಕಾರ್ಯಕ್ರಮದಲ್ಲಿ ಸಕ್ರಿಯರಾಗಿ ಇರಲು ಹೇಳಿದೆ. ಚುನಾವಣೆಗೆ ನಿಲ್ಲದಂತೆ ಹೈಕಮಾಂಡ್ ನೇರವಾಗಿ ಸೂಚಿಸಿದೆ ಎಂದು ಹೇಳಿದರು.ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.