ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನಲೆಯಲ್ಲಿ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ.
ಪ್ರಾರ್ಥನೆಗೆ ಐದು ನಿಮಿಷ ಮೊದಲು ಮಸೀದಿ ಓಪನ್ ಮಾಡಬೇಕು. ಕಂಟೈನ್ಮೆಂಟ್ ಜೋನ್ ಗಳಲ್ಲಿ ಇರುವ ಮಸೀದಿಗಳನ್ನು ಬಂದ್ ಮಾಡಬೇಕು. ನಮಾಜ್ ಮಾಡುವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.
ಪ್ರತಿದಿನದ ಇಫ್ತಿಯಾರ್ ಕೂಟಕ್ಕೆ ಅವಕಾಶ ಇರುವುದಿಲ್ಲ. ಮನೆಯಲ್ಲಿಯೇ ಇಫ್ತಿಯಾರ್ ಕೂಟ ಆಯೋಜಿಸಬಹುದು. ಸಾಮೂಹಿಕ ಪ್ರಾರ್ಥನೆ ಮಾಡುವಂತಿಲ್ಲ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿರುತ್ತದೆ. ಮಸೀದಿಗೆ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಬೇಕು. ಪ್ರಾರ್ಥನೆಗೆ ಸ್ವಂತ ಜಮಖಾನ ಮಾತ್ರ ಬಳಸಬೇಕು ಎಂದು ಹೇಳಲಾಗಿದೆ.