ಬೆಂಗಳೂರು: ಪ್ರಯಾಣಿಕ ಸೋಗಿನಲ್ಲಿ ಬಸ್‌ಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಉಪ್ಪಾರಪೇಟೆ ಪೊಲೀಸ್ ಬಂಧಿಸಿದ್ದಾರೆ. ಚಂದ್ರೇಗೌಡ (45), ಮಂಜುಳಾ (32), ಜಮಾಲ್ ಅಬ್ದುಲ್ ನಾಸಿರ್ (51) ಹಾಗೂ ಪ್ರಶಾಂತ್ (50) ಬಂಧಿತ ಆರೋಪಿಗಳು.
ಇವರು ನಗರದ ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಕಳ್ಳತನ ಮಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಉಪ್ಪಾರ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳ ಬಂಧನದಿಂದ 5 ಪ್ರಕರಣಗಳು ಬೆಳಕಿಗೆ ಬಂದಿದ್ದು, ಬಂಧಿತ ಆರೋಪಿಗಳಿಂದ 4.60 ಲಕ್ಷ ಮೌಲ್ಯದ ಚಿನ್ನಾಭರಣ 48 ಸಾವಿರ ನಗದು ವಶಕ್ಕೆ ಪಡೆದ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.