ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು ಇಂದು ಕೊರೊನಾ ಎರಡನೇ ಲಸಿಕೆ ಪಡೆದರು. ನಗರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ರಾಜ್ಯಪಾಲರು ಕೋವಿಡ್ ಲಸಿಕೆ ಪಡೆದರು.
ಮಾರ್ಚ್ 3 ರಂದು ಕೊರೊನಾ 1ನೇ ಲಸಿಕೆಯನ್ನು ರಾಜ್ಯಪಾಲರು ಹಾಕಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ, ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆಡ ಸಚಿವರು ಕೊರೋನಾ ಲಸಿಕೆಯನ್ನು ಹಾಕಿಸಿಕೊಂಡಿದ್ದರು.
60 ವರ್ಷ ವಯಸ್ಸಿಗೂ ಮೇಲ್ಪಟ್ಟವರು ಹಾಗೂ ಇತರ ಗಂಭೀರ ಕಾಯಿಲೆಗಳಿಂದ ಬಳಲುವ, 45 ವರ್ಷಕ್ಕೂ ಮೇಲ್ಪಟ್ಟವರಿಗೆ ಈ ಹಂತದಲ್ಲಿ ಲಸಿಕೆ ಹಾಕಲಾಗುತ್ತದೆ.