ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ನಗರದ ಹಗದೂರಿನಲ್ಲಿ ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಡೆಡ್ಲಿ ಆಕ್ಸಿಡೆಂಟ್ ನಡೆದಿದ್ದು, ಸಿಸಿಟಿವಿಯಲ್ಲಿ ಡೆಡ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.
ವೈಟ್ ಫೀಲ್ಡ್ ಠಾಣಾ ವ್ಯಾಪ್ತಿಯ ಹಗದೂರಿನಲ್ಲಿ ಕಂಟ್ರೋಲ್ ಸಿಗದೆ ಅಡ್ಡಾದಿಡ್ಡಿ ಚಾಲನೆ ಮಾಡಿದ ಚಾಲಕ ರಸ್ತೆ ಬದಿ ನಿಂತಿದ್ದವ್ರಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಾಹನದ ಮುಂಭಾಗ ನಜ್ಜುಗುಜ್ಜಾಗಿದೆ. ಇಂದು ಬೆಳಗ್ಗೆ 7.30 ರ ಸುಮಾರಿಗೆ ನಡೆದಿರೋ ಘಟನೆ ತಿಳಿದು ಬಂದಿದೆ. ಅದೃಷ್ಟವಶಾತ್ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.