ಬೆಂಗಳೂರು : ಈ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಜನ ಹೆದರುವ ಪರಿಸ್ಥಿತಿ ಬಂದಿದೆ. ಕಾನೂನು ಕುಲಗೆಟ್ಟು ಹೋಗಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಬಂದ ನಂತರ ಸಾರ್ವವಜನಿಕರು ಭಯಭೀತರಾಗೋ ರೀತಿಯ ಕೃತಕ ಪ್ರಯತ್ನಗಳು ನಡೆಯುತ್ತಿವೆ. ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ. ಇದರಿಂದ ಜನ ಪ್ಯಾನಿಕ್ ಆಗ್ತಿದ್ದಾರೆ. ಕಾನೂನಿನ ವ್ಯವಸ್ಥೆ ಕುಲಗೆಟ್ಟು ಹೋಗಿದೆ. ಜನರಿಗೆ ರಕ್ಷಣೆ ಸಿಗುವ ಕೊರತೆ ಎದುರಾಗಿದೆ. ಒಂದು ಸಂಘಟನೆ ಮಾಡಿದೆ ಅಂತಿದೆ. ಇದರ ಹಿಂದೆ ಯಾರಿದ್ದಾರೆ ಅಂತ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಅದನ್ನ ತನಿಖೆ ನಡೆಸಬೇಕು ಎಂದು ಹೆಚ್ಡಿಕೆ ಒತ್ತಾಯಿಸಿದ್ದಾರೆ.