ಬೀದರ್ : ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ಬೀದರ್ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರವಾಸ ಕೈಗೊಂಡಿದ್ದಾರೆ.
ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ ಶತಮಾನೋತ್ಸವ ಹಾಗೂ ಲೋಕನಾಯಕ ಭೀಮಣ್ಣ ಖಂಡ್ರೆ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಭಾಲ್ಕಿಸಾಕ್ಷಿಯಾಗಲಿದೆ. ಈ ಅಭಿನಂದನಾ ಗ್ರಂಥವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.
ಬಿಕೆಐಟಿ ಕಾಲೇಜು ಆವರಣದಲ್ಲಿ ಶತಾಯುಷಿ ಡಾ. ಭೀಮಣ್ಣ ಖಂಡ್ರೆಯವರ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ದತೆ ನಡೆಸಿದ್ದು, ಮಠಾಧೀಶರು, ಜನಪ್ರತಿನಿಧಿಗಳು, ಗಣ್ಯರಿಗೆ ಬೃಹತ್ ವೇದಿಕೆ ಮೇಲೆ 300 ಆಸನದ ವ್ಯವಸ್ಥೆ ಮಾಡಲಾಗಿದೆ.
ಜನರಿಗಾಗಿ ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ವೀರಪ್ಪ ಮೊಯ್ಲಿ, ಸಚಿವ ಸಂಪುಟದ ಸಚಿವರು, ಸುತ್ತೂರು ಶ್ರೀ, ಸಿದ್ದಗಂಗಾ ಶ್ರೀಗಳು, ಸಿರಿಗೆರಿ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.