ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಯಡಿಯೂರಪ್ಪ ಅವರು ಮೋಸ ಮಾಡಿದ್ರಾ.? ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ.
ಮೂರು ತಿಂಗಳಲ್ಲಿ ಸರ್ಕಾರ ಬೀಳುತ್ತೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿ ಅವರು ಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯ ಓಡಾಡಿದ್ರು. ಆಗ ಬರೀ 65 ಸೀಟ್ ಬಂದಿದೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ.
ಆದರೂ ಅಧಿಕಾರಕ್ಕೆ ಬಂದಿಲ್ಲ. ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲ. ಯಡಿಯೂರಪ್ಪ ಮಗ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಬೊಮ್ಮಾಯಿ ಇದ್ದಾಗ 150 ಸೀಟ್ ಬರುತ್ತೆ ಅಂತ ಯಡಿಯೂರಪ್ಪ ಹೇಳಿದ್ರಲ್ವಾ. ಅಂದ್ರೆ ಇವರೇ ಮೋಸ ಮಾಡಿರಬೇಕು. ಯಡಿಯೂರಪ್ಪ ಅವರೇ ಬಿಜೆಪಿ ಪಕ್ಷಕ್ಕೆ ಮೋಸ ಮಾಡಿದ್ದಾರೆ.
ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತಾ.. ಬಿಜೆಪಿಗೆ ಅಪ್ಪ ಮಕ್ಕಳು ಸೇರಿ ಮೋಸ ಮಾಡಿರಬೇಕು. ಆಗಲೇ ಏನು ನಡೆಯಲಿಲ್ಲ ಈಗ ಏನ್ ನಡೆಯುತ್ತೆ ಎಂದು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನೂ ಡಿಕೆಶಿವಕುಮಾರ್ ಜೈಲಿಗೆ ಹೋಗುತ್ತಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಈಶ್ವರಪ್ಪ ಅವರದು ಹರಕು ನಾಲಿಗೆ. ಅವರ ಬಗ್ಗೆ ಮಾತನಾಡೋಕೆ ಹೇಸಿಗೆ ಅನ್ನಿಸುತ್ತೆ, ಅಸಹ್ಯವಾಗುತ್ತೆ. ಈಶ್ವರಪ್ಪ ಒಬ್ಬ ಹಿರಿಯ ನಾಯಕ ಅವರ ಮೇಲೂ ಕೇಸು ಗಳು ಇಲ್ವಾ…? ಅವರು ಜೈಲಿಗೆ ಹೋಗ್ತಾರಾ….? ಈಶ್ವರಪ್ಪನಂತ ಹೇಸಿಗೆ ಮನುಷ್ಯನ ಬಗ್ಗೆ ಹೇಳಲ್ಲ ಹೇಳೋಕೆ ಅಸಹ್ಯವಾಗುತ್ತೆ ಎಂದು ಈಶ್ವರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವರದಿ : ಬಸವರಾಜ ಹೂಗಾರ