ದೇವನಹಳ್ಳಿ : ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತ (Michong Storm) ಅಬ್ಬರ ಜೋರಾಗಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟದಿಂದಾಗಿ ಹಲವು ತಗ್ಗು ಪ್ರದೇಶಗಳು ಮುಳುಗಿವೆ. ಜಲಾವೃತ್ತಗೊಂಡಿದ್ದ ತಂಬರಂ ಮತ್ತು ಪೆರುಂಗಲತ್ತೂರಿ ಪ್ರದೇಶದಲ್ಲಿ ಸಿಲುಕಿದ್ದ 15 ಮಂದಿಯನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ.
ತಮಿಳುನಾಡಿನ ಬಹುತೇಕ ರೈಲ್ವೆ ನಿಲ್ದಾಣಗಳು ಮಳೆ ನೀರಿನಿಂದ ಕೂಡಿವೆ. ಕೆಲವೆಡೆ ಸಂಚಾರಕ್ಕೆ ಅಡ್ಡಿಯಾಗಿದೆ. ಗುಡ್ಡ ಕುಸಿತಗೊಂಡಿದೆ ಈ ಹಿನ್ನೆಲೆ ಕರ್ನಾಟಕ ರಾಜ್ಯದಿಂದ ತೆರಳಬೇಕಿದ್ದ ಹತ್ತಕ್ಕೂ ಹೆಚ್ಚು ರೈಲುಗಳನ್ನು ರದ್ದು ಮಾಡಲಾಗಿದೆ ಇಂದು ಯಾವ ರೈಲು ಕೂಡ ತಮಿಳುನಾಡಿಗೆ ಹೋಗುವುದಿಲ್ಲ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಚೆನ್ನೈನಲ್ಲಿ ಲ್ಯಾಂಡ್ ಆಗಬೇಕಿದ್ದ ಒಟ್ಟು 27 ವಿಮಾನಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಡೈವರ್ಟ್ ಆಗಿವೆ. ಎಮಿರೇಟ್ಸ್, ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದು ಬೆಳಗ್ಗೆಯಿಂದ ಪ್ರಯಾಣಿಕರು ಏರ್ಪೋರ್ಟ್ನಲ್ಲಿ ಉಳಿಯುವಂತಾಗಿದೆ. ಮಳೆ ಕಡಿಮೆಯಾದ್ರೆ ಮತ್ತೆ ವಿಮಾನಗಳು ಚೆನ್ನೈಗೆ ಹೋಗಬಹುದು ಎಂದು ಪ್ರಯಾಣಿಕರು ಕಾದು ಕುಳಿತಿದ್ದಾರೆ