ದೇಶದಲ್ಲಿ ಒಂದೇ ದಿನದಲ್ಲಿ 2.34 ಲಕ್ಷ ಪ್ರಕರಣಗಳು ದೃಢಪಟ್ಟಿದ್ದು, ಮತ್ತೊಮ್ಮೆ ಸಾರ್ವಕಾಲಕ ದಾಖಲೆ ಸಂಖ್ಯೆಯ ಪ್ರಕರಣ ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಸತತ ಮೂರನೇ ದಿನ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೇ ಒಟ್ಟಾರೆ ಸೋಂಕಿತರ ಸಂಖ್ಯೆ 1.45 ಕೋಟಿಗೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,34,692 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,23,354 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 1,341 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 1,75,649ಕ್ಕೆ ಏರಿಕೆಯಾಗಿದೆ.