ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್ ದೃಢವಾದ ಬೆನ್ನಲ್ಲೆ ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿಗೂ ಕೊರೊನಾ ಸೋಂಕು ತಗುಲಿದೆ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ, ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದಂತ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಇಂತಹ ಅವರಿಗೂ ಪ್ರಾಥಮಿಕ ವರದಿಯಿಂದ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ ಎಂಬುದಾಗಿ ಮನವಿ ಮಾಡಿದ್ದಾರೆ.