ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡ ನವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ಕೃಷ್ಣಾಪುರ ಗ್ರಾಮದ ನಿವಾಸಿಗಳಾದ ಚಂದ್ರಶೇಖರ್ (30) ಮತ್ತು ಕವಿತಾ (18) ಆತ್ಮಹತ್ಯೆ ಮಾಡಿಕೊಂಡ ದಂಪತಿ.
ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿ ಸಾಕಷ್ಟು ಅನ್ಯೋನ್ಯವಾಗಿದ್ದರು. ಆದರೆ ನಿನ್ನೆ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಇದರಿಂದ ನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.