ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಂದೆ-ತಾಯಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಧೋನಿ ಅವರ ತಾಯಿ ದೇವಕಿ ದೇವಿ ಮತ್ತು ತಂದೆ ಪಾನ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ಜು ರಾಂಚಿಯ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಧೋನಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಬುಧವಾರ ಮುಂಬೈನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ತಂಡವನ್ನು ಮುನ್ನಡೆಸಲಿದ್ದಾರೆ.