Crime NewsState News

ಚರಂಡಿಯಲ್ಲಿ ಪ್ಲಾಸ್ಟಿಕ್ ಬ್ಯಾಗಿನಲ್ಲಿ ಮಗುವಿನ ಶವ ಪತ್ತೆ ; ಸ್ಥಳಕ್ಕೆ ಪೋಲೀಸರ ಭೇಟಿ ಪರಿಶೀಲನೆ

ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಘಟಪ್ರಭಾ ಸ್ಥಳೀಯ ಕಲಾಲ ಒಣಿಯಲ್ಲಿರುವ ಚರಂಡಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾದ ಘಟನೆ ನಡೆದಿದೆ.

ಇಂದು ಮುಂಜಾನೆ ಚರಂಡಿಯಲ್ಲಿ ಯಾವುದೇ ಪ್ಲಾಸ್ಟಿಕ್ ಬ್ಯಾಗಿನಲ್ಲಿ ಹಾಕಿ ಎಸೆದಿರುವುದನ್ನು ಗಮನಿಸಿದ ಜನರು ಪ್ಲಾಸ್ಟಿಕ್ ಬ್ಯಾಗ್ ತೆರೆದು ನೋಡಿದಾಗ ಅದರಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆದುಕೊಂಡ ಘಟಪ್ರಭಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭೆ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗಳನ್ನು ಹೊಂದಿರುವ ಘಟಪ್ರಭಾದಲ್ಲಿ ನವಜಾತ ಶಿಶುವಿನ ಶವ ಪತ್ತೆ ಯಾಗಿದ್ದು, ಇದು ನಗರದಲ್ಲಿ ನಡೆಯುತ್ತಿರುವ ಅನಧಿಕೃತ ಗರ್ಭಪಾತ (illegal Abortion) (ಭ್ರೂಣ ಹತ್ಯೆಯ) ಕರಾಳ ದಂಧೆಯ ಭಾಗವಾಗಿದೆ ಎಂದು ಜನರು ಆರೋಪಿಸುತ್ತಿದ್ದಾರೆ. ಪೋಲಿಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!