ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ಗೆ (BMTC) ಬಲಿಯಾಗುತ್ತಿರುವವರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂತಹದೇ ಒಂದು ಪ್ರಕರಣ ಇಂದು ಮತ್ತೆ ಬೆಳಕಿಗೆ ಬಂದಿದೆ. ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಸುಬ್ಬಯ್ಯ ಸರ್ಕಲ್ ಬಳಿ ನಡೆದಿದೆ.
ಬೆಂಗಳೂರಿನ ಸುಬ್ಬಯ್ಯ ಸರ್ಕಲ್ ಬಳಿ ಬಿಎಂಟಿಸಿ ಅಪಘಾತ ಸಂಭವಿಸಿದೆ. ಕಬ್ಬನ್ ಪೇಟೆ ನಿವಾಸಿಯಾಗಿದ್ದ ಪುಷ್ಪ (51) ಬಿಎಂಟಿಸಿಗೆ ಬಲಿಯಾದ ಮಹಿಳೆ.
ಮನೆಯಿಂದ ಬೇಕರಿಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಸ್ ಚಾಲಕ ನಾಗರಾಜ್ ಹಲಸೂರು ಗೇಟ್ ಪೊಲೀಸರ ವಶಕ್ಕೆ ಪಡೆದು ಬಂಧಿಸಿದ್ದಾರೆ.