ಮೈಸೂರು : ಡಿಸೆಂಬರ್ 31ಕ್ಕೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶ ನಿಷೇಧ ಹೇರಲಾಗಿದೆ ಎಂದು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಹತ್ವದ ಅದೇಶವನ್ನು ಹೊರಡಿಸಿದ್ದಾರೆ.
ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಶುರುವಾಗಿದ್ದು, ರಾಜ್ಯಾದ್ಯಂತ ಹೊಸ ಸಂಭ್ರಮಾಚರಣೆ ಭರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕಾರಣದಿಂದಾಗಿ ಮೈಸೂರಿನಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸುದ್ದಿಗೋಷ್ಟಿ ಆಯೋಜಿಸಿ ಮಾತನಾಡಿದ ಅವರು, ಮೈಸೂರಿನಲ್ಲಿಈ ಬಾರಿ ರಾತ್ರಿ 1 ಗಂಟೆವರೆಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 31ರ ಸಂಜೆ 7 ಗಂಟೆ ನಂತರ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರು ಪ್ರವೇಶ ನಿಷೇಧಿಸಲಾಗಿದೆ.
ರಾಜ್ಯ ಸರ್ಕಾರ ನಿಗದಿಪಡಿಸಿರುವ ಸಮಯ ಪಾಲನೆ ಮಾಡಬೇಕು. ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂ ಸ್ಟೇಗಳು ಮಾಲ್ಗಳಲ್ಲಿ ರಾತ್ರಿ 1 ಗಂಟೆಗೆ ಹೊಸ ವರ್ಷ ಸಂಭ್ರಮಾಚರಣೆ ಮುಗಿಸಬೇಕು. ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡ ರಚನೆ ಮಾಡಲಾಗಿದೆ. ಇನ್ನು ಮಹಿಳೆಯರ ಸುರಕ್ಷೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ ರಚಿಸಲಾಗಿದೆ. ಪ್ರಮುಖ ಸ್ಥಳದಲ್ಲಿ ಶ್ವಾನದಳ, ವಿದ್ವಂಸಕ ಕೃತ್ಯ ತಡೆಗಾಗಿ 4 ತಂಡ ರಚನೆ ಮಾಡಲಾಗಿದೆ
ಮೈಸೂರು ನಗರದಲ್ಲಿ 275 ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ರಿಂಗ್ ರೋಡ್ನಲ್ಲಿ 8 ಹೈವೇ ಪೆಟ್ರೋಲ್ ವಾಹನ ನಿಯೋಜನೆ ಮಾಡಲಾಗುತ್ತದೆ. ಮೈಸೂರು ನಗರದ ಹೊರವಲಯದಲ್ಲಿ 12 ಕಡೆ ಚೆಕ್ಪೋಸ್ಟ್ ನಿರ್ಮಿಸಲಾಗುತ್ತದೆ. 18 ಕಡೆ ಚೆಕ್ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ಮೇಲೆ ತೀವ್ರಾ ನಿಗಾ ವಹಿಸಲಾಗುತ್ತೆ. ಹೊಸ ವರ್ಷಾಚರಣೆ ಕಾರ್ಯಕ್ರಮ ಆಯೋಜನೆಗೆ ಅನುಮತಿ ಕಡ್ಡಾಯವಾಗಿದೆ. ಧ್ವನಿವರ್ಧಕ ಅಳವಡಿಸುವುದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬೇಕು. ಕಾರ್ಯಕ್ರಮದ ನೆಪದಲ್ಲಿ ಮಾದಕ ವಸ್ತುಗಳ ಸೇವನೆ, ಜೂಜಾಟ ನಿಷೇಧಿಸಲಾಗಿದೆ.
ನಗರದಾದ್ಯಂತ ಒಟ್ಟು 275 ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದ್ದು, ಪೊಲೀಸ್ ಕಂಟ್ರೋಲ್ ರೂಂ ಮೂಲಕ ಕಣ್ಗಾವಲು ಇಡಲಾಗುತ್ತದೆ. ನಗರದ ಹೊರವಲಯದಲ್ಲಿ 12 ಕಡೆ ಚೆಕ್ಪೋಸ್ಟ್ ಹಾಗೂ ನಗರದಲ್ಲಿ 18 ಕಡೆಗಳಲ್ಲಿ ಚೆಕ್ಪೋಸ್ಟ್ಗಳ ಸ್ಥಾಪನೆ ಮಾಡಲಾಗಿದೆ. ಮೂವರು ಡಿಸಿಪಿ, 12 ಎಸಿಪಿ, 30 ಪಿಐ, 70 ASP, 550 ಹೆಚ್ಸಿ/ಪಿಸಿ, 80 ಸಿಬ್ಬಂದಿ, 12 CAR ತುಕಡಿ, 4 ಕೆಎಸ್ಆರ್ಪಿ ತುಕಡಿ ಹಾಗೂ ನಾಲ್ಕು ಶ್ವಾನದಳ, ನಾಲ್ಕು ಕಮಾಂಡೋ ಪಡೆ ಭದ್ರತೆಗೆ ನಿಯೋಜನೆ ಮಾಡಲಾಗಿದೆ