ಅಯೋಧ್ಯೆ : ನಾಳೆ ಅಯೋಧ್ಯೆಗೆಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ತೆರಳಲಿದ್ದಾರೆ. ಬಳಿಕ ಹಲವು ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡಲಿದ್ದಾರೆ.
2024ರ ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಉದ್ಘಾಟನೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿಯವರು 11,100 ಕೋಟಿಯ ವಿವಿಧ ಯೋಜನೆಗಳ ಹಲವು ಕಾರ್ಯಕ್ರಮಗಳ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ನಾಳಿನ ಪ್ರಧಾನಿ ಮೋದಿ ಕಾರ್ಯಕ್ರಮಗಳು :
ನಾಳೆ ಬೆಳಗ್ಗೆ 11:15ಕ್ಕೆ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು 6 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಅಯೋಧ್ಯೆ (Ayodhya) ನಗರದಲ್ಲಿ 4 ಹೊಸ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ.
ಇದಾದ ಬಳಿಕ ಅಯೋಧ್ಯೆಯಲ್ಲಿ ಗ್ರೀನ್‌ಫೀಲ್ಡ್ ಟೌನ್‌ಶಿಪ್‌ಗೆ ಅಡಿಗಲ್ಲು ಹಾಕಲಿದ್ದಾರೆ. ಇನ್ನು 12:15 ಕ್ಕೆ ವಿಮಾನ ನಿಲ್ದಾಣದ (Ayodhya Airport) ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ಬಳಿಕ ರೋಡ್ ಶೋ ನಡೆಸಲಿದ್ದಾರೆ. ವಿಮಾನ ನಿಲ್ದಾಣದಿಂದ ಅಯೋಧ್ಯೆ ನಗರದೊಳಗೆ ಒಟ್ಟು 15 ಕಿಮೀ ರೋಡ್ ಶೋ (Road Show) ನಡೆಯಲಿದೆ. ಬಳಿ ಅವರು ದೆಹಲಿಗೆ ವಾಪಸ್ಸಾಗಲಿದ್ದಾರೆ.